Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:26 - ಕನ್ನಡ ಸತ್ಯವೇದವು J.V. (BSI)

26 ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವರಾಗಿ ಆ ಊರಿಂದಲೇ ಹೊರಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆಚ್ಯಾ ಮಾನಾ ತೆನಿ ಥೈತ್ನಾ ಸಿರಿಯಾತ್ಲ್ಯಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಸಮುಂದರಾಚ್ಯಾ ವಾಟೆನಿ ಗೆಲೆ, ಅತ್ತಾ ಪಾತರ್ ಕರುನ್ ಸಾರಲ್ಲ್ಯಾ ಸೆವಾಚ್ಯಾ ಕಾಮಾಕ್ನಿ ದೆವಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ದಿವ್ನ್ ಧಾಡಲ್ಲೆ ಹ್ಯಾ ಶಾರಾತ್ಲ್ಯಾ ಲೊಕಾಕ್ನಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:26
22 ತಿಳಿವುಗಳ ಹೋಲಿಕೆ  

ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು


ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕೆಲಸವನ್ನು ನಿಮ್ಮ ಪ್ರಯೋಜನಕ್ಕೋಸ್ಕರ ನನಗೆ ದಯಪಾಲಿಸಿದನು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.


ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು