Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:3 - ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಪೌಲ ಬಾರ್ನಬರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾತ್ ಲೈ ಯೆಳಾ ಪತರ್ ರಾವ್ನ್ ಧನಿಯಾಚ್ಯಾ ವಿಶಯಾತ್ ಧೈರ್ಯಾನ್ ಬೊಲ್ಲ್ಯಾನಿ, ಅನಿ ಧನಿಯಾನ್ ತೆಂಚ್ಯಾಕ್ನಾ ಚಮತ್ಕಾರಾಚಿ ಅನಿ ಅಜಾಪಾಚಿ ಕಾಮಾ ಕರುನ್ ಅಪ್ಲಿ ಕುರ್ಪೆಚಿ ಖಬರ್ ಘಟ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:3
17 ತಿಳಿವುಗಳ ಹೋಲಿಕೆ  

ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]


ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಯೇಸು ಅವನಿಗೆ - ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದಿದ್ದರೆ ನಂಬುವದೇ ಇಲ್ಲವೆಂದು ಹೇಳಿದನು.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು