Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:23 - ಕನ್ನಡ ಸತ್ಯವೇದವು J.V. (BSI)

23 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:23
21 ತಿಳಿವುಗಳ ಹೋಲಿಕೆ  

ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ಮಾತಾಡುವೆವು.


ಆಗ ನಿಮ್ಮ ಸಂತೋಷವು ಪರಿಪೂರ್ಣವಾಗುವದು. ದೇವರಾದುಕೊಂಡವಳಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ.


ಈ ಉಪದೇಶಕ್ಕೆ ಒಪ್ಪದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ, ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.


ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವು ಎಂದು ಹೇಳಿದರು.


ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು