Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:25 - ಕನ್ನಡ ಸತ್ಯವೇದವು J.V. (BSI)

25-26 ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿವಿುತ್ತ ಜೀವದ ಹಂಗನ್ನು ತೊರೆದವರಾದ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿಕೊಡುವದು ಯುಕ್ತವೆಂದು ನಾವೆಲ್ಲರೂ ಏಕಮನಸ್ಸಾಗಿ ತೀರ್ಮಾನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನಾವೆಲ್ಲರೂ ಕೆಲವರನ್ನು ಸರ್ವಾನುಮತದಿಂದ ಆರಿಸಿ ನಿಮ್ಮ ಬಳಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಿಯ ಸಹೋದರರಾದ ಬಾರ್ನಬ ಮತ್ತು ಪೌಲರೊಂದಿಗೆ ಅವರು ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಕೆಲವರನ್ನು ಆಯ್ದುಕೊಂಡು ಅವರನ್ನು ನಮ್ಮ ಪ್ರಿಯರಾದ ಬಾರ್ನಬ ಮತ್ತು ಪೌಲರೊಂದಿಗೆ ನಿಮ್ಮ ಬಳಿಗೆ ಕಳುಹಿಸುವುದು ಯುಕ್ತವೆಂದು ಒಂದೇ ಮನಸ್ಸಾಗಿರುವ ನಮಗೆ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಹೊವ್ನ್, ಅಮಿ ಸಗ್ಳ್ಯಾನಿ ಎಕುಚ್ ಮನಾನ್ ಉಲ್ಲ್ಯಾ ಲೊಕಾಕ್ನಿ ಎಚುನ್ ಕಾಡುನ್ ತುಮ್ಚ್ಯಾಕ್ಡೆ ಧಾಡುಚೆ ಮನುನ್ ಚಿಂತ್ಲ್ಯಾಂವ್, ಅಮ್ಚೊ ಪ್ರೆಮಾಚೊ ಭಾವ್ ಪಾವ್ಲು ಅನಿ ಬಾರ್ನಾಬಾಸಾಂಚ್ಯಾ ವಾಂಗ್ಡಾ ತೆನಿ ಯೆವ್ಕ್ ಲಾಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:25
18 ತಿಳಿವುಗಳ ಹೋಲಿಕೆ  

ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ಇವರೆಲ್ಲರು ಏಕಮನಸ್ಸಾಗಿ ದೇವರ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಕೆಲವು ಮಂದಿ ಹೆಂಗಸರೂ ಯೇಸುವಿನ ತಾಯಿಯಾದ ಮರಿಯಳೂ ಆತನ ತಮ್ಮಂದಿರೂ ಅವರ ಸಂಗಡ ಇದ್ದರು.


ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಇನ್ನು ಮೇಲೆ ಅವನು ದಾಸನಾಗದೆ ದಾಸನಿಗಿಂತ ಉತ್ತಮನಾಗಿ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನೂ ಎಷ್ಟೋ ಪ್ರಿಯನಾಗಿರುವನು.


ಅವನನ್ನು ನಂಬಿಗಸ್ತನಾದ ಪ್ರಿಯ ಸಹೋದರನಾಗಿರುವ ನಿಮ್ಮ ಊರಿನ ಒನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುವ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವರು.


ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸಂಗತಿಗಳನ್ನೆಲ್ಲಾ ನಿಮಗೆ ತಿಳಿಸುವನು.


ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.


ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.


ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು