Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:28 - ಕನ್ನಡ ಸತ್ಯವೇದವು J.V. (BSI)

28-29 ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28-29 ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮ್ಕಾ ಅನಿಬಿ ಲೈ ವಜ್ಜೆ ರ್‍ಹಾವ್ಚೆ ನ್ಹಯ್ ಮನ್ತಲೊ ಪವಿತ್ರ್ ಆತ್ಮ್ಯಾಚೊ ನಿರ್ದಾರ್, ತೆಕಾ ಅಮಿ ಒಪ್ಸುನ್ ಘೆಟ್ಲಾತ್ ತುಮಿ ಹಿ ಕಾಮಾ ಯೆವ್ಡಿಚ್ ಮಾನುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:28
14 ತಿಳಿವುಗಳ ಹೋಲಿಕೆ  

ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು. ಯಾಕಂದರೆ ನನ್ನ ನೊಗವು ಮೃದುವಾದದ್ದು; ನನ್ನ ಹೊರೆಯು ಹೌರವಾದದ್ದು ಅಂದನು.


ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ದೇವರಾತ್ಮನಿಂದ ನಡಿಸಲ್ಪಡುವವನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತನ ವಿಧಿಯೇ ಎಂದು ಚೆನ್ನಾಗಿ ತಿಳುಕೊಳ್ಳಲಿ.


ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ.


ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.


ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಕನ್ನಿಕೆಯರನ್ನು ಕುರಿತು ಕರ್ತನಿಂದ ಬಂದ ಆಜ್ಞೆ ನನಗೆ ಯಾವದೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿವಿುತ್ತ ಜೀವದ ಹಂಗನ್ನು ತೊರೆದವರಾದ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿಕೊಡುವದು ಯುಕ್ತವೆಂದು ನಾವೆಲ್ಲರೂ ಏಕಮನಸ್ಸಾಗಿ ತೀರ್ಮಾನಿಸಿದೆವು.


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇವಿುನಲ್ಲಿದ್ದ ಅಪೊಸ್ತಲರೂ ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ಒಪ್ಪಿಸಿ ಇವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು