ಅಪೊಸ್ತಲರ ಕೃತ್ಯಗಳು 15:36 - ಕನ್ನಡ ಸತ್ಯವೇದವು J.V. (BSI)36 ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಉಲ್ಲಿ ದಿಸಾ ಹೊಲ್ಲ್ಯಾ ತನ್ನಾ ಪಾವ್ಲುನ್ ಬಾರ್ನಾಬಾಕ್, ಅಮಿ ದೆವಾಚಿ ಗೊಸ್ಟಿಯಾ ಸಾಂಗಲ್ಲ್ಯಾ ಲೈ ಶಾರಾತ್ನಿ ಭಾವಾಕ್ನಿ ಅನಿ ಭೆನಿಯಾಕ್ನಿ ಭೆಟುನ್ ತೆನಿ ಕಶೆ ಹಾತ್ ಮನುನ್ ಬಗುನ್ ಯೆಂವ್ವಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.