Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ದರ್ಬೆ ಅನಿ ಲಿಸ್ರ್ತಿ ಮನ್ತಲ್ಯಾ ಶಾರಾಕ್ನಿ ಗೆಲೊ ಥೈ ತಿಮೊಥಿ ಮನ್ತಲೊ ಎಕ್ ಕ್ರಿಸ್ತಾಂವ್ ಹೊತ್ತೊ, ತೆಚೊ ಬಾಬಾ ಗ್ರಿಕ್ ಭಾಶೆಚೊ ಮಾನುಸ್ ಹೊಲ್ಲೊ, ಅನಿ ಬಾಯ್ ಜುದೆವಾಂಚಿ ವಿಶ್ವಾಸಿ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:1
29 ತಿಳಿವುಗಳ ಹೋಲಿಕೆ  

ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ


ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು.


ನನ್ನ ಜೊತೆಕೆಲಸದವನಾದ ತಿಮೊಥೆಯನೂ ನನ್ನ ಸ್ವಜನರಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನೂ ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ.


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ನಿಂತನು.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ.


ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ಪ್ರಕಾರವಾಗಿರಲಿಲ್ಲ; ಆತನಲ್ಲಿ ಹೌದೆಂಬದೇ ನೆಲೆಗೊಂಡಿದೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.


ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.


ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.


ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಗಳನ್ನು ತೆಗೆದುಕೊಂಡದರಿಂದ ದೇವಕುಲವು ಅನ್ಯದೇಶಗಳವರೊಡನೆ ವಿುಶ್ರವಾಯಿತು. ಪ್ರಭುಗಳೂ ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು ಎಂದು ತಿಳಿಸಿದರು.


ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;


ಕ್ರಿಸ್ತ ಯೇಸುವಿನ ಸೆರೆಯವನಾಗಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನೂ ಜೊತೆಕೆಲಸದವನೂ ಆಗಿರುವ ಫಿಲೆಮೋನನೆಂಬ ನಿನಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು