Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:17 - ಕನ್ನಡ ಸತ್ಯವೇದವು J.V. (BSI)

17 ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿ ಅಮ್ಚ್ಯಾ ಅನಿ ಪಾವ್ಲುಚ್ಯಾ ವಾಂಗ್ಡಾ ಯೆವ್ನ್ ಮೊಟ್ಯಾನ್ ಬೊಬ್ ಮಾರುನ್, ಹಿ ಲೊಕಾ ಮೊಟ್ಯಾ ದೆವಾಚಿ ಸೆವಾ ಕರ್‍ತಲಿ, ತುಮಿ ಕಶೆ ದೆವಾಚಿ ರಾಕ್ವನ್ ಪಾವುನ್ ಘೆವ್ಕ್ ಹೊತಾ ಮನ್ತಲೆ ಸಾಂಗುಲ್ಲಾತ್ ಮಟ್ಲಿನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:17
31 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.


ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.


ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಿದ್ಧಿಗೆ ತರುವ ದೇವರನ್ನು ಕೂಗಿಕೊಳ್ಳುವೆನು.


ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಇವರು - ಬೋಧಕನೇ, ನೀನು ಸರಿಯಾಗಿ ಮಾತಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.


ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ


ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ, ಯಾವದನ್ನರ್ಪಿಸಿ ಮಹೋನ್ನತದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನೂ ಒಂದು ವರುಷದ ಕರುಗಳನ್ನೂ ತೆಗೆದುಕೊಂಡುಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ.


ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಅವರ ನಿರ್ಲಜ್ಜಾಕೃತ್ಯಗಳನ್ನು ಅನೇಕರು ಅನುಸರಿಸುವರು; ಅವರ ನಿವಿುತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು