Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:19 - ಕನ್ನಡ ಸತ್ಯವೇದವು J.V. (BSI)

19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆ ಬಗಟಲ್ಲ್ಯಾ ತಿಜಾ ಯಜಮಾನಾಕ್ ಅತ್ತಾ ತಿಜ್ಯಾಕ್ನಾ ಪೈಸೆ ಖಮ್ವುಕ್ ಹೊಯ್ನಾ ಮನ್ತಲೆ ಕಳುನ್ ಯೆಲೆ, ತಸೆ ಹೊವ್ನ್ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಧರುನ್ ಶಾರಾತ್ಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಗಾಂವ್ಚೆ ಅಧಿಕಾರಿ ಹೊತ್ತ್ಯಾಕ್ಡೆ ವಡುನ್ ನ್ಹೆಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:19
24 ತಿಳಿವುಗಳ ಹೋಲಿಕೆ  

ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಕೊಂಡು ಹೋಗಿ - ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ,


ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ - ರಾಜನೇ, ಯಾವನಾದರೂ ಮೂವತ್ತು ದಿನಗಳ ತನಕ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದಿಯಲ್ಲಾ ಎಂದು ಕೇಳಲು ರಾಜನು - ಹೌದು, ಮೇದ್ಯಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರ ಎಂದು ಉತ್ತರಕೊಟ್ಟನು.


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು


ಅವರನ್ನು ಅಧಿಪತಿಗಳ ಮುಂದೆ ತಂದು - ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಗಲಿಬಿಲಿ ಮಾಡುತ್ತಾರೆ;


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಅವನು - ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.


ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದಾಗಿ ಕೇಳುವಂಥ ಅದೇ ಹೋರಾಟವು ನಿಮಗುಂಟು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು