Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:20 - ಕನ್ನಡ ಸತ್ಯವೇದವು J.V. (BSI)

20 ಅವರನ್ನು ಅಧಿಪತಿಗಳ ಮುಂದೆ ತಂದು - ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಗಲಿಬಿಲಿ ಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಜನರು ಪೌಲ ಸೀಲರನ್ನು ನ್ಯಾಯಾಧೀಶರ ಬಳಿಗೆ ತಂದು, “ಈ ಜನರು ಯೆಹೂದ್ಯರು. ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತ್ಯಾ ಲೊಕಾನಿ ಪಾವ್ಲು ಅನಿ ಸಿಲಾಸಾಕ್ ಝಡ್ತಿ ಕರ್‍ತಲ್ಯಾ ಅಧಿಕಾರಿಕ್ಡೆ ಬಲ್ವುನ್ ಹಾನುನ್ ಹೆನಿ ಜುದೆವಾಂಚಿ ಲೊಕಾ ಅಮ್ಚ್ಯಾ ಶಾರಾತ್ ಧಾಂದಲ್ ಉಟ್ವುಲಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:20
14 ತಿಳಿವುಗಳ ಹೋಲಿಕೆ  

ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.


ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಎರಡು ಗಂಟೆ ಹೊತ್ತು ಕೂಗಿದರು.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.


ಇವರು ಯೆಹೂದ್ಯರಾಗಿದ್ದು ರೋಮಾಯರಾದ ನಾವು ಅವಲಂಬಿಸಿ ನಡಿಸಕೂಡದಂಥ ಆಚಾರಗಳನ್ನು ಪ್ರಕಟಿಸುತ್ತಾರೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು