Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:22 - ಕನ್ನಡ ಸತ್ಯವೇದವು J.V. (BSI)

22 ಆಗ ದೊಂಬೀ ಜನರು ಕೂಡಿ ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು; ಮತ್ತು ಅಧಿಪತಿಗಳು - ಇವರ ವಸ್ತ್ರಗಳನ್ನು ಹರಿದು ತೆಗೆದು ಚಡಿಗಳಿಂದ ಹೊಡೆಯಬೇಕೆಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜನರು ಪೌಲ ಸೀಲರಿಗೆ ವಿರೋಧವಾಗಿದ್ದರು. ಆಗ ನಾಯಕರು ಪೌಲ ಸೀಲರ ಬಟ್ಟೆಗಳನ್ನು ಹರಿದುಹಾಕಿಸಿ ಅವರಿಬ್ಬರಿಗೂ ಕೋಲುಗಳಿಂದ ಬಲವಾಗಿ ಹೊಡೆಸಿ, ಸೆರೆಮನೆಗೆ ಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಸಗ್ಳ್ಯಾ ಲೊಕಾಂಚೊ ತಾಂಡೊ ಪಾವ್ಲುಕ್ ಅನಿ ಸಿಲಾಸಾಕ್ ವಿರೊದ್ ಹೊವ್ನ್ ಹೊತ್ತೊ, ತನ್ನಾ ಮುಂಖಡಾನಿ ತೆಂಚೆ ದೊಗಾಂಚೆ ಕಪ್ಡೆ ಪಿಂಜುನ್ ಟಾಕುಕ್ ಲಾವ್ನ್ ತೆಂಕಾ ಖಾಟಿನ್ ಲೈ ಮಾರುಕ್ ಲಾವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:22
15 ತಿಳಿವುಗಳ ಹೋಲಿಕೆ  

ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ಅದಕ್ಕೆ ಪೌಲನು - ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡುಹೋದರೆ ಸರಿ ಎಂದು ಹೇಳಿದನು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು