Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:24 - ಕನ್ನಡ ಸತ್ಯವೇದವು J.V. (BSI)

24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಂಥಾ ಆಜ್ಞೆಯನ್ನು ಪಡೆದು, ಅವನು ಸೆರೆಮನೆಯ ಒಳಕೋಣೆಯಲ್ಲಿ ಅವರನ್ನು ಹಾಕಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಹೊವ್ನ್, ಬಂದಿಖಾನ್ಯಾಚ್ಯಾ ಅಧಿಕಾರ್ಯಾನ್ ತೆಂಕಾ ಭುರ್ತುಲ್ಯಾ ಖೊಲಿತ್ ಘಾಲುನ್, ತೆಂಚಿ ಪಾಯಾ ಝಾಡಾಚ್ಯಾ ಬೊಡ್ಯಾಂಚ್ಯಾ ಮದ್ದಿ ಘಾಲುನ್ ಬಾಂದ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:24
11 ತಿಳಿವುಗಳ ಹೋಲಿಕೆ  

ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ ಎಂದು ಆಡಿದ್ದೀಯಲ್ಲಾ.


ನೀನು ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿದ್ದೀ; ನನ್ನ ದಾರಿಗಳನ್ನೆಲ್ಲಾ ಮಂದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದೀ.


ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ನೀನು ಅವರಿಗೆ - ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು ಎಂಬದಾಗಿ ಹೇಳು ಎಂದು ಅಪ್ಪಣೆಕೊಟ್ಟನು.


ಅವನ ಕಾಲುಗಳು ಕೋಳದಲ್ಲಿ ನೊಂದವು; ಕಬ್ಬಿಣದ ಬೇಡಿಗಳಿಂದ ಅವನು ಬಂಧಿತನಾದನು.


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು