Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:28 - ಕನ್ನಡ ಸತ್ಯವೇದವು J.V. (BSI)

28 ಆದರೆ ಪೌಲನು ಮಹಾಶಬ್ದದಿಂದ ಕೂಗಿ ಅವನಿಗೆ - ನೀನೇನೂ ಕೇಡು ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಪಾವ್ಲುನ್ ತೆಕಾ, “ತಿಯಾ ಜಿವ್ ಕಾಡುನ್ ಘೆವ್ ನಕ್ಕೊ! ಅಮಿ ಸಗ್ಳ್ಯೆಬಿ ಹಿತ್ತೆಚ್ ಹಾತ್” ಮನುನ್ ಮೊಟ್ಯಾನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:28
15 ತಿಳಿವುಗಳ ಹೋಲಿಕೆ  

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ?


ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಕಿವಿಯನ್ನು ಮುಟ್ಟಿ ಅವನಿಗೆ ವಾಸಿಮಾಡಿದನು.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಅಸ್ವಸ್ಥನಾದವನನ್ನು ಸ್ನೇಹಿತನೂ ಅಣ್ಣನೂ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.


ವಿುತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ;


ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.


ಅವನು - ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು