ಅಪೊಸ್ತಲರ ಕೃತ್ಯಗಳು 16:3 - ಕನ್ನಡ ಸತ್ಯವೇದವು J.V. (BSI)3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಪಾವ್ಲುನ್ ತಿಮೊಥಿಕ್ ಅಪ್ನಾಚ್ಯಾ ವಾಂಗ್ಡಾ ಘೆವ್ನ್ ಜಾವ್ಚೆ ಮನುನ್ ಆಸ್ಯಾ ಕರ್‍ಲ್ಯಾನ್, ಖರೆ ತ್ಯಾ ಜುದೆವಾಂಚ್ಯಾ ಲೊಕಾಕ್ನಿ ತೊ ಗ್ರಿಕಾಂಚೊ ಮನ್ತಲೆ ಗೊತ್ತ್ ಹೊತ್ತೆ ತಸೆ ಹೊವ್ನ್, ತಿಮೊಥಿಕ್ ಸುನ್ನತ್ ಕರಸ್ಲ್ಯಾನ್. ಅಧ್ಯಾಯವನ್ನು ನೋಡಿ |