Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:36 - ಕನ್ನಡ ಸತ್ಯವೇದವು J.V. (BSI)

36 ಸೆರೇಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ - ಅಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಬಂಧಿಖಾನ್ಯಾಚ್ಯಾ ಅಧಿಕಾರಿನ್ ಪಾವ್ಲುಕ್ ಅನಿ ಸಿಲಾಸಾಕ್ ಅಮ್ಚ್ಯಾ ಮುಖಂಡಾನಿ ಸೈನಿಕಾಕ್ನಾ ತುಮ್ಕಾ ಸುಟ್ಕಾ ಕರುಚೆ ಮನುನ್ ಸಾಂಗುನ್ ಧಾಡ್ಲಾ ತುಮಿ ಸಮಾಧಾನಾನ್ ಜಾವಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:36
13 ತಿಳಿವುಗಳ ಹೋಲಿಕೆ  

ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.


ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ಎಲೀಷನು ಅವನಿಗೆ - ಸಮಾಧಾನದಿಂದ ಹೋಗು ಎಂದು ಉತ್ತರಕೊಟ್ಟನು. ಅವನು ಹೊರಟು ಹೋದನು.


ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವದಿಲ್ಲ; ಆದದರಿಂದ ನೀನು ಸಮಾಧಾನದಿಂದ ಹಿಂದಿರುಗಿಹೋಗು; ಅವರನ್ನು ಸಿಟ್ಟುಗೊಳಿಸಬಾರದು ಎಂದು ಹೇಳಲು ದಾವೀದನು ಆಕೀಷನಿಗೆ -


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.


ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.


ಆಗ ಏಲಿಯು ಆಕೆಗೆ - ಸಮಾಧಾನದಿಂದ ಹೋಗು; ಇಸ್ರಾಯೇಲ್ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ ಎನ್ನಲು ಹನ್ನಳು ಏಲಿಗೆ -


ಅವನು - ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು ಅಂದನು.


ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.


ಅವರಿಗೆ ಬಹಳ ಪೆಟ್ಟುಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ - ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಖಂಡಿತವಾಗಿ ಹೇಳಿದರು.


ಬೆಳಗಾದ ಮೇಲೆ ಅಧಿಪತಿಗಳು ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಜವಾನರ ಕೈಯಲ್ಲಿ ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು