Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:37 - ಕನ್ನಡ ಸತ್ಯವೇದವು J.V. (BSI)

37 ಅದಕ್ಕೆ ಪೌಲನು - ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡುಹೋದರೆ ಸರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ಪೌಲನು, “ನಾವು ಏನು ತಪ್ಪು ಮಾಡಿದ್ದೇವೆಂಬುದನ್ನು ನಿಮ್ಮ ನಾಯಕರು ನಿರೂಪಿಸದೆ ನಮ್ಮನ್ನು ಜನರ ಎದುರಿನಲ್ಲಿ ಹೊಡೆಸಿ ಸೆರೆಮನೆಗೆ ಹಾಕಿಸಿದರು. ನಾವು ರೋಮಿನ ಪ್ರಜೆಗಳು. ಆದ್ದರಿಂದ ನಮಗೂ ಹಕ್ಕುಗಳಿವೆ. ಈಗ ಅವರು ನಮ್ಮನ್ನು ಗೋಪ್ಯವಾಗಿ ಬಿಡುಗಡೆ ಮಾಡಬೇಕೆಂದಿರುವರೇ? ಇಲ್ಲ! ನಾಯಕರೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಖರೆ ಪಾವ್ಲುನ್, “ಅಮ್ಚಿ ಚುಕ್ ಕಾಯ್ ಮನುನ್ ದಾಕಯಿನಸ್ತಾನಾ ತುಮ್ಚ್ಯಾ ಮುಖಂಡಾನ್ ಲೊಕಾಂಚ್ಯಾ ಇದ್ರಾಕ್ ಅಮ್ಕಾ ಮಾರುಕ್ ಲಾವ್ನ್ ಬಂದಿಖಾನ್ಯಾತ್ ಘಾಲುಕ್ ಲಾವ್ಲ್ಯಾನ್, ತುಮಿ ರೊಮ್ ಶಾರಾತ್ಲಿ ಲೊಕಾ ಅಮ್ಕಾಬಿ ಹಕ್ಕ್ ಹಾಯ್, ಅತ್ತಾ ತೊ ಅಮ್ಕಾ ಕೊನ್ ಗೊತ್ತ್ ನಸ್ತಾನಾ ಘುಟ್ಟಾನಿ ಸುಟ್ಕಾ ಕರುಲ್ಲಾ ಕಾಯ್? ಅಮಿ ಜಾಯ್ನಾಂವ್, ಮುಖಂಡುಚ್ ಯೆವ್ನ್ ಅಮ್ಕಾ ಹಿತ್ನಾ ಭಾಯ್ರ್ ಬಲ್ವುನ್ ಘೆವ್ನ್ ಜಾವ್ಚೊ,” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:37
11 ತಿಳಿವುಗಳ ಹೋಲಿಕೆ  

ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?


ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.


ಆದದರಿಂದ ನಾನು ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು