Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:39 - ಕನ್ನಡ ಸತ್ಯವೇದವು J.V. (BSI)

39 ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತಸೆ ಹೊವ್ನ್ ತೆನಿ ಪಾವ್ಲು ಅನಿ ಸಿಲಾಸಾಕ್ಡೆ ಯೆವ್ನ್ ಚುಕ್ ಮಾಗ್ಲ್ಯಾನಿ, ಅನಿ ತೆಂಕಾ ಬಂದಿಖಾನ್ಯಾತ್ನಾ ಭಾಯ್ರ್ ಬಲ್ವುನ್ ನ್ಹೆವ್ನ್ ಅಪ್ಲ್ಯಾ ಶಾರಾತ್ನಾ ತುಮಿ ಜಾವಾ ಮನುನ್ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:39
10 ತಿಳಿವುಗಳ ಹೋಲಿಕೆ  

ಊರಿನವರೆಲ್ಲರೂ ಯೇಸುವಿನೆದುರಿಗೆ ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಅವರು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.


ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು