Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:4 - ಕನ್ನಡ ಸತ್ಯವೇದವು J.V. (BSI)

4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇವಿುನಲ್ಲಿದ್ದ ಅಪೊಸ್ತಲರೂ ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ಒಪ್ಪಿಸಿ ಇವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಳಿಕ ಪೌಲನು ಮತ್ತು ಅವನ ಸಂಗಡಿಗರು ಬೇರೆ ಪಟ್ಟಣಗಳ ಮೂಲಕ ಪ್ರಯಾಣ ಮಾಡಿದರು. ಜೆರುಸಲೇಮಿನಲ್ಲಿರುವ ಅಪೊಸ್ತಲರ ಮತ್ತು ಹಿರಿಯರ ನಿಯಮಗಳನ್ನೂ ತೀಮಾರ್ನಗಳನ್ನೂ ಅವರು ವಿಶ್ವಾಸಿಗಳಿಗೆ ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚ್ಯಾ ಮಾನಾ ಪಾವ್ಲು ಅನಿ ತೆಚಿ ವಾಂಗ್ಡಿಯಾ ದುಸ್ರ್ಯಾ ಶಾರಾಂತ್ನಾ ಜಾವ್ಕ್ ಲಾಗಲ್ಲೆ ಜೆರುಜಲೆಮಾತ್ಲ್ಯಾ ವಿಸ್ವಾಸಿ ಲೊಕಾಕ್ನಿ ಅಪೊಸ್ತಲಾಂಚಿ ಅನಿ ಜಾಂನ್ತ್ಯಾಂಚಿ ನೆಮಾ ಅನಿ ತಿರ್ಮಾನಾ ಸಾಂಗುನ್ ತೆಂಕಾ ಮಾನುನ್ ಘೆವ್ನ್ ರಾವ್ಚೆ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:4
5 ತಿಳಿವುಗಳ ಹೋಲಿಕೆ  

ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು