Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:6 - ಕನ್ನಡ ಸತ್ಯವೇದವು J.V. (BSI)

6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪಾವ್ಲು ಅನಿ ತೆಚೆ ವಾಂಗ್ಡಿ ಪ್ರೆಮಾನಿ ಹೊತ್ತೆ,, ಪಿರ್ಗಿಯಾ ಅನಿ ಗಲ್ಯಾತ್ ಮನ್ತಲ್ಯಾ ಪ್ರಾಂತ್ಯಾತ್ನಾ ಗೆಲೆ, ಅಸಿಯಾ ಸಿಮೆತ್ ದೆವಾಚಿ ಬರಿ ಖಬರ್ ಕಳ್ವುಚೆ ಮನುನ್ ಪವಿತ್ರ್ ಆತ್ಮ್ಯಾನ್‍ ತೆಂಕಾ ಅಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:6
31 ತಿಳಿವುಗಳ ಹೋಲಿಕೆ  

ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವದೇನಂದರೆ -


ಮೂಸ್ಯಕ್ಕೆ ಎದುರಾಗಿ ಬಂದಾಗ ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಸಹೋದರರೇ, ಆಸ್ಯ ಸೀಮೆಯಲ್ಲಿ ನಮಗೆ ಸಂಭವಿಸಿದ ಸಂಕಟವನ್ನು ಕುರಿತು ವಿಚಾರಿಸುತ್ತೀರೋ ಅದರಲ್ಲಿ ನಾವು ಬಲವನ್ನು ಮೀರಿದಂಥ ಅತ್ಯಧಿಕವಾದ ಭಾರದಿಂದ ಕುಗ್ಗಿಹೋಗಿ ಜೀವವುಳಿಯುವ ಮಾರ್ಗವನ್ನು ಕಾಣದವರಾದೆವೆಂಬದನ್ನು ನೀವು ತಿಳಿಯಬೇಕೆಂದು ಅಪೇಕ್ಷಿಸುತ್ತೇನೆ.


ದೇವಜನರಿಗೋಸ್ಕರ ಹಣ ವಸೂಲುಮಾಡುವದನ್ನು ಕುರಿತು ನಾನು ಹೇಳುವದೇನಂದರೆ, ಗಲಾತ್ಯದ ಸಭೆಗಳಿಗೆ ನಾನು ಹೇಳಿಕೊಟ್ಟ ಕ್ರಮದಂತೆ ನೀವೂ ಮಾಡಿರಿ.


ಈ ವರಗಳನ್ನೆಲ್ಲಾ ಆ ಒಬ್ಬ ಆತ್ಮನೇ ತನ್ನ ಚಿತ್ತಕ್ಕೆ ಬಂದ ಹಾಗೆ ಒಬ್ಬೊಬ್ಬನಿಗೆ ಹಂಚಿಕೊಟ್ಟು ನಡಿಸುತ್ತಾನೆ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.


ಪೇತ್ರನು ಆ ದರ್ಶನದ ವಿಷಯದಲ್ಲಿ ಆಲೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ - ಅಗೋ, ಇಬ್ಬರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -


ಅವರ ಮನೆಯಲ್ಲಿ ಕೂಡುವ ಸಭೆಗೆ ಸಹ ನನ್ನ ವಂದನೆಯನ್ನು ಹೇಳಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೆ ವಂದನೆ.


ಆಸ್ಯಸೀಮೆಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು