Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಪಾವ್ಲುನ್ ಬೆರೊಯಾ ಶಾರಾತ್ ಯೆವ್ನ್ ದೆವಾಚ್ಯಾ ಗೊಸ್ಟಿಯಾ ಸಾಂಗ್ಲ್ಯಾನ್, ಮನ್ತಲಿ ಖಬರ್ ಆಯ್ಕುನ್ ಥೆಸಲೊನಿಕಾತ್ಲ್ಯಾ ಜುದೆವಾಂಚ್ಯಾ ಲೊಕಾಕ್ನಿ ಕಂಗಾಲ್ ಕರುನ್ ಧಾಂದಲ್ ಉಟ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:13
14 ತಿಳಿವುಗಳ ಹೋಲಿಕೆ  

ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -


ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಜನರನ್ನೂ ಹಿರಿಯರನ್ನೂ ಶಾಸ್ತ್ರಿಗಳನ್ನೂ ರೇಗಿಸಿದರು; ಮತ್ತು ಬಂದು ಅವನನ್ನು ಹಿಡಿದು ಹಿರೀಸಭೆಗೆ ತೆಗೆದುಕೊಂಡು ಹೋಗಿ


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಭೂಲೋಕದಲ್ಲಿ ಸಮಾಧಾನವನ್ನುಂಟುಮಾಡುವದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭೇದವನ್ನುಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಹೇಳುತ್ತೇನೆ.


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು