Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:16 - ಕನ್ನಡ ಸತ್ಯವೇದವು J.V. (BSI)

16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಥೆನ್ಸ್ ಮನ್ತಲ್ಯಾ ಶಾರಾತ್ ಪಾವ್ಲು ಸಿಲಾಸ್ ಅನಿ ತಿಮೊಥಿಚಿ ವಾಟ್ ಬಗಿತ್ ಹೊತ್ತೊ, ತ್ಯಾ ಶಾರಾತ್ ಸಗ್ಳ್ಯಾಕ್ಡೆ ಮುರ್ತಿಯಾಚ್ ಹೊತ್ತೆ ಬಗುನ್ ತೆಚ್ಯಾ ಮನಾಕ್ ಲೈ ದುಖ್ ಹೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:16
20 ತಿಳಿವುಗಳ ಹೋಲಿಕೆ  

ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.


ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು.


ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ.


ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬೊಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು