Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:17 - ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪಾವ್ಲುನ್ ದೆವಾಚ್ಯಾ ಗುಡಿತ್ ಜುದೆವಾಂಚ್ಯಾ ಅನಿ ಜುದೆವ್ ನ್ಹಯ್ ಹೊಲ್ಲ್ಯಾ ಗ್ರಿಕಾಚ್ಯಾ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್, ಅನಿ ಶಾರಾಚ್ಯಾ ಬಾಜಾರ್ ಕರ್‍ತಲ್ಯಾ ಜಾಗ್ಯಾರ್ಬಿ ಥೊಡ್ಯಾ ಲೊಕಾಂಚ್ಯಾ ವಾಂಗ್ಡಾ ಸದ್ದಾಬಿ ಚರ್ಚಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:17
17 ತಿಳಿವುಗಳ ಹೋಲಿಕೆ  

ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ -


ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.


ಹೀಗಿರುವದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವದು; ಮತ್ತು ನೀವು ಕೋಣೆಗಳೊಳಗೆ ಕಿವಿಮಾತು ಆಡಿದ್ದು ಮಾಳಿಗೆಗಳ ಮೇಲೆ ಸಾರಲಾಗುವದು.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಭಕ್ತರಾದ ಜನರು ಸ್ತೆಫನನನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು