Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:25 - ಕನ್ನಡ ಸತ್ಯವೇದವು J.V. (BSI)

25 ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೊ ದೆವುಚ್ ಮಾನ್ಸಾಕ್ ಜಿವ್, ಶ್ವಾಸ್ ಅನಿ ಸಗ್ಳ್ಯೆ ದಿತಲೊ, ತೆಕಾ ಮಾನ್ಸಾಂಚ್ಯಾ ಗುಡಿಚಿ ಗರಜ್ ನಾ ತೆಕಾ ಕಾಯ್ಬಿ ಕಮ್ಮಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:25
25 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಆತನಿಗೆ ಆಲೋಚನಾ ಕರ್ತನು ಯಾರು? ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?


ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ.


ಮನುಷ್ಯಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೇ ಪ್ರಯೋಜನವಷ್ಟೆ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾಣೆ,


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ನಾನು ಯೆಹೋವನನ್ನು ಕುರಿತು - ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ ಎಂತಲೂ


ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವದಾದರೆ


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು