Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:30 - ಕನ್ನಡ ಸತ್ಯವೇದವು J.V. (BSI)

30 ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅದ್ಲ್ಯಾ ಕಾಲಾತ್ಲ್ಯಾ ಲೊಕಾನಿ ದೆವಾಕ್ ಅರ್ತ್‍ ಕರುನ್ ಘೆವ್ಕ್ ನಾತ್, ಖರೆ ದೆವಾನ್ ತೆಕಾ ಸಗ್ಳೆ ಧ್ಯಾನ್ ದಿವ್ಕ್ ನಾ, ಅತ್ತಾ ತರಿಬಿ ಜಗಾತ್ಲ್ಯಾ ಸಗ್ಳ್ಯಾಕ್ಡೆ ಬಿ ದೆವಾಕ್ಡೆ ಮನ್ ಪರ್ತುನ್ ಘೆವ್ಚೆ ಮನುನ್ ತೆನಿ ಹುಕುಮ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:30
26 ತಿಳಿವುಗಳ ಹೋಲಿಕೆ  

ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಅವರು ಹೊರಟುಹೋಗಿ ಜನರಿಗೆ - ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸಾರಿ


ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು