Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:7 - ಕನ್ನಡ ಸತ್ಯವೇದವು J.V. (BSI)

7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಯೊಸೊನಾನ್ ತೆಂಕಾ ಅಪ್ಲ್ಯಾ ಘರಾತ್ ಥವ್ನ್ ಘೆಟ್ಲಾ , ಹೆನಿ ಸಗ್ಳ್ಯಾನಿ ಸಿಸರಾ ಮನ್ತಲ್ಯಾಚೆ ಖಾಯ್ದೆ ಆಯ್ಕಿನಾ ಹೊಲಾತ್, ಅನಿ ಜೆಜು ಮನ್ತಲೊ ಅನಿ ಎಕ್ ರಾಜಾ ಹಾಯ್ ಮನುನ್ ಸಾಂಗ್ತಾತ್, ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:7
12 ತಿಳಿವುಗಳ ಹೋಲಿಕೆ  

ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.


ಇವರು ಯೆಹೂದ್ಯರಾಗಿದ್ದು ರೋಮಾಯರಾದ ನಾವು ಅವಲಂಬಿಸಿ ನಡಿಸಕೂಡದಂಥ ಆಚಾರಗಳನ್ನು ಪ್ರಕಟಿಸುತ್ತಾರೆ ಅಂದರು.


ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.


ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.


ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು.


ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ; ರಾಜನೇ, ಇವರು ನಿನ್ನನ್ನು ಲಕ್ಷಿಸುವದಿಲ್ಲ, ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದು ಅರಿಕೆಮಾಡಲು


ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು.


ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ಪಟ್ಟಣದವರೂ ಪಟ್ಟಣದ ಅಧಿಕಾರಿಗಳೂ ಈ ಮಾತುಗಳನ್ನು ಕೇಳಿ ಕಳವಳಪಟ್ಟು


ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು