Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:12 - ಕನ್ನಡ ಸತ್ಯವೇದವು J.V. (BSI)

12 ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಖಾಯಾ ಮನ್ತಲ್ಯಾ ಶಾರಾತ್ ಗಲ್ಲಿಯೊನ್ ಮನ್ತಲ್ಲೊ ರೊಮ್ ಸಾಮ್ರಾಜ್ಯಾಚೊ ಅದಿಕಾರಿ ಹೊಲ್ಲ್ಯಾ ತನ್ನಾ ಥೊಡಿ ಜುದೆವಾಂಚಿ ಲೊಕಾ ಪಾವ್ಲುಚ್ಯಾ ವಿರೊಧ್ ಗೊಳಾ ಹೊವ್ನ್ ತೆನಿ ಪಾವ್ಲುಕ್ ಧರುನ್ ಝಡ್ತಿ ಕರ್‍ತಲ್ಲ್ಯಾ ಜಾಗ್ಯಾತ್ ಬಲ್ವುನ್ ನೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:12
27 ತಿಳಿವುಗಳ ಹೋಲಿಕೆ  

ಆಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಅವನು ಬುದ್ಧಿವಂತನಾಗಿದ್ದ ಸೆರ್ಗ್ಯಪೌಲನೆಂಬ ಅಧಿಪತಿಯ ಹತ್ತಿರದಲ್ಲಿದ್ದನು. ಅಧಿಪತಿಯು ಬಾರ್ನಬ ಸೌಲರನ್ನು ತನ್ನ ಬಳಿಗೆ ಕರಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷೆ ಅದೆ ಎಂದು ಹೇಳಿದನು.


ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.


ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.


ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?


ಅವರ ಮನೆಯಲ್ಲಿ ಕೂಡುವ ಸಭೆಗೆ ಸಹ ನನ್ನ ವಂದನೆಯನ್ನು ಹೇಳಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೆ ವಂದನೆ.


ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು.


ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.


ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು