Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:15 - ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಹಿ ವಾದ್ ವಿವಾದಾ ಕರ್‍ತಲಿ ಬೊಲ್ನಿಯಾ ಅನಿ ನಾವಾ ತುಮ್ಚ್ಯಾ ಸ್ವತಾಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಂಬದ್ ಪಡಲ್ಲಿ ಹಾತ್, ತಸೆ ತುಮಿಚ್ ಹೆ ಸಮಾ ಕರುನ್ ಘೆವ್ಚೆ, ಹ್ಯಾ ಸಂಗ್ತಿಯಾಕ್ನಿ ಝಡ್ತಿ ಕರ್‍ತಲೊ ಹೊವ್ನ್ ರ್‍ಹಾವ್ಕ್ ಮಾಕಾ ಮನ್ ನಾ! ಮನುನ್ ಸಾಂಗುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:15
13 ತಿಳಿವುಗಳ ಹೋಲಿಕೆ  

ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.


ಅವರ ಮತದ ವಿಷಯದಲ್ಲಿಯೂ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. ಆ ಯೇಸು ಜೀವಿತನಾಗಿದ್ದಾನೆಂದು ಪೌಲನು ಹೇಳಿದನು.


ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.


ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.


ಕಲ್ಪನಾಕಥೆಗಳಿಗೂ ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ದೇವರು ನಿರ್ವಹಿಸುವ ಕೆಲಸಕ್ಕೆ ಅನುಕೂಲವಾಗಿಲ್ಲ; ಇದರಲ್ಲಿ ನಂಬಿಕೆಯೇ ಮುಖ್ಯವಾದದ್ದು.


ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು


ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -


ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.


ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.


ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಪೂಜಿಸುವದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು ದೂರು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು