ಅಪೊಸ್ತಲರ ಕೃತ್ಯಗಳು 18:18 - ಕನ್ನಡ ಸತ್ಯವೇದವು J.V. (BSI)18 ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪಾವ್ಲು ವಿಶ್ವಾಸಿ ಭಾವಾಚ್ಯಾ ವಾಂಗ್ಡಾ ಕೊರಿಂಥಾತ್ ಉಲ್ಲಿ ದಿಸಾ ರ್‍ಹಾಲೊ ತೆಚ್ಯಾ ಮನಾ ಸಮುಂದ್ರರಾಚ್ಯಾ ವಾಟೆನ್ ಪ್ರಿಸ್ಕಿಲಾ ಅನಿ ಅಕ್ವಿಲ್ ಮನ್ತಲ್ಲ್ಯಾಂಚ್ಯಾ ವಾಂಗ್ಡಾ ಸಿರಿಯಾಕ್ ಜಾವ್ಕ್ ಲಾಗಲ್ಲೊ, ಪ್ರಯಾನ್ ಕರುಚ್ಯಾ ಅದ್ದಿಚ್ ತೆನಿ ಕೆಂಕ್ರೆ ಶಾರಾತ್ ಅಪ್ಲಿ ಕೆಸಾ ಕಾತ್ರುನ್ ಘೆವ್ಕ್ ಗೆಲೊ, ಕಶ್ಯಾಕ್ ಮಟ್ಲ್ಯಾರ್, ತೆನಿ ಶಪತ್ ಕರಲ್ಲೆ ಹೊತ್ತೆ ಅಧ್ಯಾಯವನ್ನು ನೋಡಿ |