Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:19 - ಕನ್ನಡ ಸತ್ಯವೇದವು J.V. (BSI)

19 ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ಎಫೆಸಿ ಮನ್ತಲ್ಯಾ ಶಾರಾಕ್ ಗೆಲೆ ಪ್ರಿಸ್ಕಿಲ್ಲ್ ಅನಿ ಅಕ್ವಿಲ್ಲಾಕ್ ಪಾವ್ಲುನ್ ತೆಂಕಾ ಸೊಡುನ್ ಗೆಲೆ ಹಿತ್ತೆಚ್ ಪಾವ್ಲುನ್ ಎಫೆಸ್‍ ಮನ್ತಲ್ಯಾ ಗಾಂವಾತ್ ರಾತಾನಾ ಸಿನಾಗೊ ಜಾವ್ನ್ ಜುದೆವಾಂಚ್ಯಾ ಲೊಕಾಂಚ್ಯಾಕ್ಡೆ ಚರ್ಚಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:19
21 ತಿಳಿವುಗಳ ಹೋಲಿಕೆ  

ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಪಂಚಾಶತ್ತಮ ದಿನದ ಹಬ್ಬದ ತನಕ ಎಫೆಸದಲ್ಲಿರುವೆನು;


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ಅವರು ಅವನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ -


ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು.


ಕಡೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ - ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ ಪಾಲಕರಾಗಿದ್ದಾರೆಂಬದನ್ನು ತಿಳಿಯದಿರುವ ಮನುಷ್ಯನು ಇದ್ದಾನೇ?


ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.


ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು