Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:23 - ಕನ್ನಡ ಸತ್ಯವೇದವು J.V. (BSI)

23 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮನಾ ತೊ ಉಲ್ಲೊ ಯೆಳ್ ಥೈ ರಾವ್ನ್ ಜಾತಾನಾ ಗಲಾತ್ಯಾ ಅನಿ ಪಿರ್ಗಿಯಾತ್ನಾ ಫಿರುನ್ಗೆತ್ ಸಗ್ಳ್ಯಾ ವಿಶ್ವಾಸಿ ಲೊಕಾಕ್ನಿ ಘಟ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:23
22 ತಿಳಿವುಗಳ ಹೋಲಿಕೆ  

ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ದೇವಜನರಿಗೋಸ್ಕರ ಹಣ ವಸೂಲುಮಾಡುವದನ್ನು ಕುರಿತು ನಾನು ಹೇಳುವದೇನಂದರೆ, ಗಲಾತ್ಯದ ಸಭೆಗಳಿಗೆ ನಾನು ಹೇಳಿಕೊಟ್ಟ ಕ್ರಮದಂತೆ ನೀವೂ ಮಾಡಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವದೇನಂದರೆ -


ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟುಹೋದರು.


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಮೇದ್ಯಯನಾದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲ ಕೊಟ್ಟು ಆಶ್ರಯನಾಗಿ ನಿಂತೆನು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.


ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿದ್ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು