Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:25 - ಕನ್ನಡ ಸತ್ಯವೇದವು J.V. (BSI)

25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಧನಿಯಾಚ್ಯಾ ವಿಶಯಾತ್ ತೆನಿ ಬರೆ ಶಿಕುನ್ ಘೆಟಲ್ಯಾನ್, ಅನಿ ತೊ ಲೈ ಉಮ್ಮೆದಿಚ್ಯಾ ಮನಾನ್ ಜೆಜುಚ್ಯಾ ವಿಶಯಾತ್ ಸಮಾಕರುನ್ ಶಿಕಾಪಾ ಶಿಕ್ವಿತ್ ಹೊತ್ತೊ, ತೆಕಾ ಜುವಾಂವಾಚ್ಯಾ ಬಾಲ್ತಿಮಾಚ್ಯಾ ವಿಶಯಾತ್ ತವ್ಡೆಚ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:25
27 ತಿಳಿವುಗಳ ಹೋಲಿಕೆ  

ಅವನು - ನೀವು ಯಾವದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ ಎಂದು ಕೇಳಿದ್ದಕ್ಕೆ ಅವರು - ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡೆವು ಅಂದರು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ.


ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.


ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ?


ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂತಲೂ


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ ಸದಾಚಾರಿಗಳಾಗಿ ನಡೆಯುವವರು ಧನ್ಯರು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ನಿನಗೆ ಉಪದೇಶಿಸಿರುವ ವಿಷಯಗಳು ಯಥಾರ್ಥವಾದವುಗಳೆಂದು ಇದರಿಂದ ನೀನು ಗೊತ್ತುಮಾಡಿಕೊಳ್ಳಬಹುದು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು