Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:27 - ಕನ್ನಡ ಸತ್ಯವೇದವು J.V. (BSI)

27 ಆಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹೆ ಸಗ್ಳೆ ಹೊಲ್ಯಾ ಮಾನಾ ಅಪೊಲ್ಲೊಸಾನ್ ಅಖಾಯಾಕ್ ಜಾವ್ಚೆ ಮನುನ್ ನಿರ್ದಾರ್ ಕರ್‍ಲ್ಯಾನ್, ತನ್ನಾ ಎಫೆಸಾತ್ಲ್ಯಾ ವಿಶ್ವಾಸಿ ಲೊಕಾನಿ ಅಖಾಯಿಯಾತ್ಲ್ಯಾ ವಿಶ್ವಾಸಿ ಲೊಕಾಕ್ನಿ ಚಿಟ್ ಲಿವ್ನ್ ಮಜ್ಜತ್ ಕರುನ್ ತೆಕಾ ಸ್ವಾಗತ್ ಕರುಕ್ ಮನುನ್ ಘೆಟ್ಲ್ಯಾನಿ, ತೊ ಥೈ ಪಾವಲ್ಯಾ ತನ್ನಾ ದೆವಾಚ್ಯಾ ಮೊಟ್ಯಾ ಕುರ್ಪೆ ವೈನಾ ಥೈ ಹೊತ್ತ್ಯಾ ವಿಶ್ವಾಸಿ ಲೊಕಾಕ್ನಿ ಎಕ್ ಮಜತ್ಕಾರಿ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:27
26 ತಿಳಿವುಗಳ ಹೋಲಿಕೆ  

ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನಿಗೆ ದಾಯಾದನಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನನ್ನು ಕುರಿತು ಅಪ್ಪಣೆಗಳನ್ನು ಹೊಂದಿದಿರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.


ಆದದರಿಂದ ನಿಮಗೆ ಕ್ರಿಸ್ತ ನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.


ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.


ನಾನು ಬಂದ ಮೇಲೆ ನೀವು ಯಾರನ್ನು ಯೋಗ್ಯರೆಂದು ಸೂಚಿಸುವಿರೋ ಅವರನ್ನು ಯೆರೂಸಲೇವಿುಗೆ ನಿಮ್ಮ ಉಪಕಾರದ್ರವ್ಯವನ್ನು ತೆಗೆದುಕೊಂಡು ಹೋಗುವದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.


ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.


ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.


ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು