Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:7 - ಕನ್ನಡ ಸತ್ಯವೇದವು J.V. (BSI)

7 ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೇ ಅವರನ್ನು ಬಿಟ್ಟು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದ ತೀತಯುಸ್ತ ಎಂಬವನ ಮನೆಗೆ ಹೋದನು. ಅವನ ಮನೆ ಪ್ರಾರ್ಥನಾಮಂದಿರದ ಪಕ್ಕದಲ್ಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೌಲನು ಸಭಾಮಂದಿರವನ್ನು ಬಿಟ್ಟು ತೀತಯುಸ್ತ ಎಂಬುವನ ಮನೆಗೆ ಹೋದನು. ಈ ಮನುಷ್ಯನು ನಿಜದೇವರನ್ನು ಆರಾಧಿಸುತ್ತಿದ್ದನು. ಇವನ ಮನೆ ಸಭಾಮಂದಿರದ ಪಕ್ಕದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಪಾವ್ಲು ಸಿನಾಗೊ ಸೊಡುನ್ ತಿತಯುಸ್ತ್ ಮನ್ತಲ್ಯಾಚ್ಯಾ ಘರಾಕ್ ಗೆಲೊ, ತೊ ಮಾನುಸ್ ದೆವಾಕ್ ಆರಾಧನ್‍ ಕರಿತ್ ಹೊತ್ತೊ, ತೆಚೆ ಘರ್ ಸಿನಾಗೊಚ್ಯಾ ಬಾಜುಕುಚ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:7
9 ತಿಳಿವುಗಳ ಹೋಲಿಕೆ  

ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ಯೂಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಾಭಿವೃದ್ಧಿಗಾಗಿ ನನ್ನ ಜೊತೆಗೆಲಸದವರಾಗಿದ್ದಾರೆ; ಇವರಿಂದ ನನಗೆ ಉಪಶಮನ ಉಂಟಾಯಿತು.


ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.


ಪೌಲನೂ ಬಾರ್ನಬನೂ ಸಭಾಮಂದಿರವನ್ನು ಬಿಟ್ಟುಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್‍ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು