Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:1 - ಕನ್ನಡ ಸತ್ಯವೇದವು J.V. (BSI)

1 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಪೊಲ್ಲೊಸ್ ಕೊರಿಂಥ್ ಶಾರಾತ್ ರಾತಾನಾ ಪಾವ್ಲುನ್ ಮಡ್ಡಿ ವೈಲಾ ಗಾಂವಾತ್ನಿ ಜಾವ್ನ್ಗೆತ್ ಎಫೆಸಾಕ್ ಯೆವ್ನ್ ಉಲ್ಯಾ ಶಿಸಾಕ್ನಿ ಭೆಟುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:1
16 ತಿಳಿವುಗಳ ಹೋಲಿಕೆ  

ಸಹೋದರನಾದ ಅಪೊಲ್ಲೋಸನ ಸಂಗತಿಯೇನಂದರೆ ಸಹೋದರರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ಅವನನ್ನು ಬಹಳವಾಗಿ ಬೇಡಿಕೊಂಡೆನು. ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ. ಒಳ್ಳೇ ಸಮಯ ಸಿಕ್ಕಿದಾಗ ಬರುವನು.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ.


ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.


ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಪಂಚಾಶತ್ತಮ ದಿನದ ಹಬ್ಬದ ತನಕ ಎಫೆಸದಲ್ಲಿರುವೆನು;


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು