ಅಪೊಸ್ತಲರ ಕೃತ್ಯಗಳು 19:27 - ಕನ್ನಡ ಸತ್ಯವೇದವು J.V. (BSI)27 ಇದರಿಂದ ನಮ್ಮ ಉದ್ಯೋಗಕ್ಕೆ ಅಪಕೀರ್ತಿ ಬರುವ ಹಾಗಿರುವದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ ಎಲ್ಲಾ ಆಸ್ಯಸೀಮೆಯೂ ಲೋಕವೂ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆಯೂ ಗಂಡಾಂತರವುಂಟೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದುಹೋಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅಶೆ ರಾತಾನಾ ಅಮ್ಚ್ಯಾ ಹ್ಯಾ ವ್ಯಾಪಾರಾಚೆ ನಾವ್ ಬುರ್ಶೆ ಹೊವ್ನ್ ಜಾವ್ಕ್ ಲಾಗ್ಲಾ, ತವ್ಡೆಚ್ ನ್ಹಯ್ ಅಮ್ಚ್ಯಾ ಅರ್ತಮೆ ದೆವತೆಚಿ ಗುಡಿಬಿ ತರಾಸಾತ್ ಹಾಯ್, ತಿಚೆ ಮೊಟೆಪಾನಬಿ ನಾಸ್ ಹೊವ್ನ್ ಜಾತಾ, ಆಸ್ಯಾ ಶಾರಾತ್ಲಿ ಸಗ್ಳಿ ಲೊಕಾ ಪುಜ್ಯಾ ಕರ್‍ತಲೆ ಹಿಚೆ ನಾವ್ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |