Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:3 - ಕನ್ನಡ ಸತ್ಯವೇದವು J.V. (BSI)

3 ಅವನು - ನೀವು ಯಾವದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ ಎಂದು ಕೇಳಿದ್ದಕ್ಕೆ ಅವರು - ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೌಲನು ಅವರಿಗೆ, “ನೀವು ಯಾವ ಬಗೆಯ ದೀಕ್ಷಾಸ್ನಾನ ಪಡೆದಿರಿ?” ಎಂದು ಕೇಳಿದನು. ಅವರು, “ಯೋಹಾನನು ಬೋಧಿಸಿದ ದೀಕ್ಷಾಸ್ನಾನವನ್ನು ನಾವು ಮಾಡಿಸಿಕೊಂಡೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲುನ್ ತೆಂಕಾ,“ ತುಮಿ ಖಚ್ಚ್ಯಾ ರಿತಿಚೆ ಬಾಲ್ತಿಮ್ ಘೆಟ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್. ತೆನಿ ಜುವಾಂವಾಚೆ ಬಾಲ್ತಿಮ್ ಅಮಿ ಕರುನ್ ಘೆಟ್ಲ್ಯಾಂವ್ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:3
8 ತಿಳಿವುಗಳ ಹೋಲಿಕೆ  

ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಯಾಕಂದರೆ ಆ ವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು.


ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು