Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:34 - ಕನ್ನಡ ಸತ್ಯವೇದವು J.V. (BSI)

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಎರಡು ಗಂಟೆ ಹೊತ್ತು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೆ ಅವನು ಯೆಹೂದ್ಯನೆಂದು ಗುರುತಿಸಿದ ಕೂಡಲೇ, ಅವರೆಲ್ಲರೂ ಎರಡು ಗಂಟೆಗಳ ಕಾಲ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ,” ಎಂದು ಒಂದೇ ಸಮನೆ ಬೊಬ್ಬೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ…!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಹೊಲ್ಯಾರ್ ಅಲೆಕ್ಸಾಂಡರ್ ಮನ್ತಲ್ಲೊ ಮಾನುಸ್ ಜುದೆವಾಂಚೊ ಮನುನ್ ಕಳಲ್ಲ್ಯಾ ತನ್ನಾ ಲೊಕಾನಿ, ಎಫೆಸ್ ಶಾರಾಚ್ಯಾ ಅರ್ತೆಮಿ ಮನ್ತಲಿ ಮಹಾದೆವಿ! ಮನುನ್ ಎಕುಚ್ ಸಮಾ ದೊನ್ ತಾಸ್ ಪತರ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:34
10 ತಿಳಿವುಗಳ ಹೋಲಿಕೆ  

ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.


ಅವರನ್ನು ಅಧಿಪತಿಗಳ ಮುಂದೆ ತಂದು - ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಗಲಿಬಿಲಿ ಮಾಡುತ್ತಾರೆ;


ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ.


ಹಾದರ ಮಾಡಬಾರದೆಂದು ಹೇಳುವ ನೀನು ಹಾದರ ಮಾಡುತ್ತೀಯೋ? ಮೂರ್ತಿಗಳಲ್ಲಿ ಅಸಹ್ಯಪಡುತ್ತಿರುವ ನೀನು ದೇವಸ್ಥಾನದಲ್ಲಿ ಕಳ್ಳತನ ಮಾಡುತ್ತೀಯೋ?


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಅವರು ತರಲ್ಪಟ್ಟ ಹೋರಿಗಳಲ್ಲೊಂದನ್ನು ತೆಗೆದುಕೊಂಡು ಸಿದ್ಧಪಡಿಸಿ ತಮ್ಮ ದೇವರಾದ ಬಾಳನ ಹೆಸರು ಹೇಳಿ - ಬಾಳನೇ, ನಮಗೆ ಕಿವಿಗೊಡು ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ; ಅವರು ವೇದಿಯ ಸುತ್ತಲು ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀದೇವಿಯ ಗುಡಿಯಂತೆ ಸಣ್ಣ ಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಕೆಲಸಕೊಡುತ್ತಿದ್ದನು.


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಕಡೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ - ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ ಪಾಲಕರಾಗಿದ್ದಾರೆಂಬದನ್ನು ತಿಳಿಯದಿರುವ ಮನುಷ್ಯನು ಇದ್ದಾನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು