Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:10 - ಕನ್ನಡ ಸತ್ಯವೇದವು J.V. (BSI)

10 ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಪಿರ್ಗಿಯಾತ್ಲೆ, ಪಂಪಿಲಿಯಾತ್ಲೆ, ಇಜಿಪ್ತಾತ್ಲೆ ಅನಿ ಲಿಬಿಯಾಚ್ಯಾ ಜಗೊಳ್ಲ್ಯಾ ಸಿರೆನಿತ್ಲೆ, ಅನಿ ಥೊಡಿ ಲೊಕಾ ರೊಮಾತ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:10
34 ತಿಳಿವುಗಳ ಹೋಲಿಕೆ  

ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಜನಾಂಗಗಳೂ ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;


ನನ್ನ ಬೇಡಿಗಳಿಗೆ ನಾಚಿಕೆಪಡದೆ ರೋಮಾಪುರಕ್ಕೆ ಬಂದ ಕೂಡಲೆ ಬಹು ವಿಚಾರಣೆಯಿಂದ ನನ್ನನ್ನು ಹುಡುಕಿ ಕಂಡುಕೊಂಡನು.


ಹೀಗಿರುವದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ.


ಕಿಲಿಕ್ಯಕ್ಕೂ ಪಂಫೂಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.


ತರುವಾಯ ಪಿಸಿದ್ಯಸೀಮೆಯನ್ನು ಹಾದು ಪಂಫುಲ್ಯಸೀಮೆಗೆ ಬಂದು


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು. ಇವನು ಯಾರಂದರೆ - ಅಲೆಕ್ಸಾಂದ್ರ ರೂಫ ಎಂಬವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.


ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನೂ ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು; ಲೂಬ್ಯರೂ ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.


ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ವಿುತ್ರರಾಜ್ಯದವರು, ಇವರೆಲ್ಲಾ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ!


ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.


ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.


ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.


ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು