Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:14 - ಕನ್ನಡ ಸತ್ಯವೇದವು J.V. (BSI)

14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಪೆದ್ರು ಹುರಲ್ಲ್ಯಾ ಆಕ್ರಾ ಲೊಕಾ ಅಪೊಸ್ತಲಾಕ್ನಿ ಘೆವ್ನ್ ಇಬೆ ರ್‍ಹಾವ್ನ್, ಗೊಳಾ ಹೊಲ್ಲ್ಯಾ ಲೊಕಾಕ್ನಿ ಮೊಟ್ಯಾ ಧನಾನ್ ಸಾಂಗುಕ್ ಲಾಗ್ಲೊ: ಜುದೆವಾನು, ಜೆರುಜಲೆಮಾತ್ಲ್ಯಾ ಲೊಕಾನು, ಮಿಯಾ ಸಾಂಗ್ತಲ್ಯಾಕ್ ಕಾನ್ ದಿವ್ನ್ ಆಯ್ಕಾ, ತುಮಿ ಕಳ್ವುನ್ ಘೆವ್ಚಿ ಹೊಲ್ಲಿ ಸಂಗ್ತಿಯಾ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:14
18 ತಿಳಿವುಗಳ ಹೋಲಿಕೆ  

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು;


ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ಮಾಡಬೇಕೆಂದಿರುವದನ್ನು ಕುರಿತು ಎಚ್ಚರಿಕೆಯುಳ್ಳವರಾಗಿರ್ರಿ.


ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.


ಯಾಜಕರಾದ ಲೇವಿಯರೊಡನೆ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ - ಇಸ್ರಾಯೇಲ್ಯರೇ, ನಿಶಬ್ದವಾಗಿದ್ದು ಕೇಳಿರಿ. ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾದಿರಷ್ಟೆ.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ; ಯೆಹೋವನು ಚೀಯೋನಿಗೆ ತಿರುಗಿ ಬರುವದನ್ನು ಪ್ರತ್ಯಕ್ಷವಾಗಿ ನೋಡುತ್ತಿದ್ದಾರೆ.


ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ -


ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ಉನ್ನತಪರ್ವತವನ್ನು ಹತ್ತಿಕೋ; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ - ಇಗೋ, ನಿಮ್ಮ ದೇವರು!


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು