Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:17 - ಕನ್ನಡ ಸತ್ಯವೇದವು J.V. (BSI)

17 ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಆಕ್ರಿಚ್ಯಾ ದಿಸಾತ್ನಿ ಅಪ್ನಿ ಕರ್‍ತಲೆ ಕಾಯ್ ಮನುನ್ ದೆವ್ ಸಾಂಗ್ತಾ! ಮಿಯಾ ಮಾಜೊ ಆತ್ಮೊ ಸಗ್ಳ್ಯಾ ಲೊಕಾಂಚ್ಯಾ ವರ್‍ತಿ ಘಾಲ್ತಾ, ತುಮ್ಚಿ ಲೆಕಾ ಅನಿ ಲೆಕಿಯಾ ಪ್ರವಾದ್ ಕರ್ತಾತ್, ತುಮ್ಚಿ ದಾಂಡ್ಗಿ ಲೊಕಾ ದರ್ಶನ್ ಬಗ್ತ್ಯಾತ್, ಅನಿ ತುಮ್ಚಿ ಮ್ಹಾತಾರಿ ಮಾನ್ಸಾ ಸಪ್ನಾ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:17
38 ತಿಳಿವುಗಳ ಹೋಲಿಕೆ  

ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಹುಲ್ಲು ಕೊಯಿದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ ಭೂವಿುಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.


ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿ. ಅದೇನಂದರೆ -


ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸುವರು.


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು