Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:2 - ಕನ್ನಡ ಸತ್ಯವೇದವು J.V. (BSI)

2 ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಮಳ್ಬಾಕ್ನಾ ಎಗ್ದಾಚ್ ಎಕ್ ಆವಾಜ್ ಯೆಲೊ ತೊ ಆವಾಜ್ ಮೊಟೊ ವಾರೊ ಯೆಲ್ಲ್ಯಾ ಸಾರ್ಕೊ ಹೊತ್ತೊ. ಅನಿ ತೊ ಅವಾಜ್ ತೆನಿ ಬಸಲ್ಲ್ಯಾ ಘರಾತ್ ಫುರಾ ಪಗಳ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:2
14 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಆಗ ತಿರಿಗಿ - ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು ಎಂಬ ವಾಣಿಯಾಯಿತು. ಆಹಾ, ಯೆಹೋವನು ಅಲ್ಲಿ ಹಾದುಹೋದನು. ಆತನ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು; ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲಿಯೂ ಆತನಿರಲಿಲ್ಲ.


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು.


ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -


ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.


ಆ ಸಪ್ಪಳವಾದಾಗ ಜನರು ಗುಂಪುಗುಂಪಾಗಿ ಕೂಡಿಬಂದು ಪ್ರತಿಯೊಬ್ಬರು ತಮ್ಮ ತಮ್ಮ ಭಾಷೆಯಲ್ಲೇ ಇವರು ಮಾತಾಡುವದನ್ನು ಕೇಳಿ ಭ್ರಮೆಗೊಂಡರು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು