ಅಪೊಸ್ತಲರ ಕೃತ್ಯಗಳು 2:23 - ಕನ್ನಡ ಸತ್ಯವೇದವು J.V. (BSI)23 ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜೆಜುಕ್ ತುಮ್ಕಾ ಹಾತಾತ್ ಒಪ್ಸುನ್ ದಿತಲಿ ದೆವಾಚಿಚ್ ಯವ್ಜನ್ ಹೊತ್ತಿ, ದೆವಾನ್ ಲೈ ಫಾಟಿಚ್ ಹೆ ನಿರ್ಧಾರ್ ಕರುನ್ ಥವಲ್ಲ್ಯಾನ್. ಖರೆ ತುಮಿ ಪಾಪಿ ಲೊಕಾಂಚ್ಯಾ ಮಜತಿನ್ ತೆಕಾ ಕುರ್ಸಾರ್ ಮಾರ್ಲ್ಯಾಸಿ. ಅಧ್ಯಾಯವನ್ನು ನೋಡಿ |