Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:32 - ಕನ್ನಡ ಸತ್ಯವೇದವು J.V. (BSI)

32 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ದೆವಾನ್ ಜೆಜುಕ್ ಮರ್ನಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನ್. ಅನಿ ಅಮಿ ಸಗ್ಳೆ ಹೆಕಾ ಸಾಕ್ಷಿ ಹೊವ್ನ್ ಹಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:32
24 ತಿಳಿವುಗಳ ಹೋಲಿಕೆ  

ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ನೀವು ಮೊದಲಿನಿಂದ ನನ್ನ ಸಂಗಡ ಇದ್ದ ಕಾರಣ ನೀವೂ ಸಾಕ್ಷಿಗಳಾಗಿದ್ದೀರಿ.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ನಮ್ಮನ್ನೂ ತನ್ನ ಪರಾಕ್ರಮದಿಂದ ಎಬ್ಬಿಸುವನು.


ಇದಲ್ಲದೆ ಸತ್ತವರು ಎದ್ದು ಬರುವದಿಲ್ಲವೆಂಬದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು