ಅಪೊಸ್ತಲರ ಕೃತ್ಯಗಳು 2:33 - ಕನ್ನಡ ಸತ್ಯವೇದವು J.V. (BSI)33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜೆಜು ಸರ್ಗಾರ್ ಜಾವ್ನ್ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲ್ಯಾ, ಅನಿ ತೆಚ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಸಾರ್ಕೆ ಪವಿತ್ರ್ ಆತ್ಮೊ ತೆಕಾ ದಿಲ್ಯಾನ್, ತಸೆ ಹೊವ್ನ್ ಜೆಜುನ್ ತೊ ಆತ್ಮೊ ಅಮ್ಚ್ಯಾ ವರ್‍ತಿ ಘಾಟ್ಲಾ, ತುಮಿ ತೆ ಬಗುಕ್ ಲಾಗ್ಲ್ಯಾಸಿ ಅನಿ ಆಯ್ಕುಕ್ ಲಾಗ್ಲ್ಯಾಸಿ. ಅಧ್ಯಾಯವನ್ನು ನೋಡಿ |