Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:37 - ಕನ್ನಡ ಸತ್ಯವೇದವು J.V. (BSI)

37 ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಲೊಕಾನಿ ಹೆ ಸಗ್ಳೆ ಆಯಿಕ್ಲ್ಯಾನಿ ತನ್ನಾ ತೆಂಚ್ಯಾ ಮನಾಕ್ ಲೈ ಬೆಜಾರ್ ಹೊಲೊ, ತನ್ನಾ ತೆನಿ ಪೆದ್ರುಕ್ ಅನಿ ಹುರಲ್ಲ್ಯಾ ಅಪೊಸ್ತಲಾಕ್ನಿ “ಭಾವಾನು ಅತ್ತಾ ಅಮಿ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:37
20 ತಿಳಿವುಗಳ ಹೋಲಿಕೆ  

ಆಗ ಆ ಗುಂಪಿನವರು - ಹಾಗಾದರೆ ನಾವೇನು ಮಾಡಬೇಕು ಎಂದು ಅವನನ್ನು ಕೇಳಿದ್ದಕ್ಕೆ ಅವನು -


ಆಗ ನಾನು - ಕರ್ತನೇ, ನಾನೇನು ಮಾಡಬೇಕು? ಎಂದು ಕೇಳಲು ಕರ್ತನು ನನಗೆ - ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವದಕ್ಕೆ ನಿನಗೆ ನೇವಿುಸಿರುವದೆಲ್ಲಾ ಅಲ್ಲಿ ತಿಳಿಸಲ್ಪಡುವದು ಎಂದು ಹೇಳಿದನು.


ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.


ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು - ಗುರುವೇ, ನಾವೇನು ಮಾಡಬೇಕು ಎಂದು ಅವನನ್ನು ಕೇಳಲು ಅವನು -


ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು;


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.


ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು