Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:38 - ಕನ್ನಡ ಸತ್ಯವೇದವು J.V. (BSI)

38 ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಪೆದ್ರುನ್ ತೆಂಕಾ “ತುಮ್ಚ್ಯಾತ್ಲೊ ಹರ್ ಎಕ್ಲೊಬಿ ಅಪ್ಲ್ಯಾ ಪಾಪಾತ್ನಾ ಪರ್ತುನ್ ದೆವಾಕ್ಡೆ ಯೆವ್ನ್ ಜೆಜು ಕ್ರಿಸ್ತಾಚ್ಯಾ ನಾಂವಾನ್ ಬಾಲ್ತಿಮ್ ಕರುನ್ ಘೆಂವ್ದಿತ್, ತನ್ನಾ ದೆವ್ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ, ಅನಿ ದೆವಾನ್ ಗೊಸ್ಟ್ ದಿಲ್ಲೊ ಪವಿತ್ರ್ ಆತ್ಮೊ ತುಮಿ ಘೆವ್ಕ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:38
43 ತಿಳಿವುಗಳ ಹೋಲಿಕೆ  

ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಅವರಿಗೆ - ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆಮೇಲೆ ಅವರು ಅವನನ್ನು - ಇನ್ನೂ ಕೆಲವು ದಿವಸ ಇರಬೇಕೆಂದು ಬೇಡಿಕೊಂಡರು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಕ್ರಿಸ್ತ ಯೇಸುವಿನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಪಾಲುಗಾರರಾಗುವದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆದರೆ ಪೇತ್ರನು ಅವನಿಗೆ - ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಆಗ ಆ ಗುಂಪಿನವರು - ಹಾಗಾದರೆ ನಾವೇನು ಮಾಡಬೇಕು ಎಂದು ಅವನನ್ನು ಕೇಳಿದ್ದಕ್ಕೆ ಅವನು -


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು