ಅಪೊಸ್ತಲರ ಕೃತ್ಯಗಳು 2:6 - ಕನ್ನಡ ಸತ್ಯವೇದವು J.V. (BSI)6 ಆ ಸಪ್ಪಳವಾದಾಗ ಜನರು ಗುಂಪುಗುಂಪಾಗಿ ಕೂಡಿಬಂದು ಪ್ರತಿಯೊಬ್ಬರು ತಮ್ಮ ತಮ್ಮ ಭಾಷೆಯಲ್ಲೇ ಇವರು ಮಾತಾಡುವದನ್ನು ಕೇಳಿ ಭ್ರಮೆಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೊ ಆವಾಜ್ ಆಯ್ಕುನ್ ಥೈ ದುಸ್ರ್ಯಾ ದುಸ್ರ್ಯಾ ಭಾಶೆಚಿ ಲೊಕಾ ಗೊಳಾ ಹೊಲಿ, ಕಶ್ಯಾಕ್ ಮಟ್ಲ್ಯಾರ್ ತಿ ದೆವಾಚಿ ಲೊಕಾ ಅಪ್ಲ್ಯಾ ಅಪ್ಲ್ಯಾ ಸ್ವತಾಚ್ಯಾ ಭಾಶ್ಯಾನಿ ಬೊಲುಕ್ ಲಾಗಲ್ಲೆ ತೆ ಬಗುನ್ ಥೈ ಗೊಳಾ ಹೊಲ್ಲಿ ಲೊಕಾ ಆಜಾಪ್ ಹೊಲಿ. ಅಧ್ಯಾಯವನ್ನು ನೋಡಿ |