Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:7 - ಕನ್ನಡ ಸತ್ಯವೇದವು J.V. (BSI)

7 ಎಲ್ಲರು ಆಶ್ಚರ್ಯದಿಂದ ಬೆರಗಾಗಿ - ಇಗೋ, ಮಾತಾಡುತ್ತಿರುವ ಇವರೆಲ್ಲರು ಗಲಿಲಾಯದವರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ತಿ ಲೊಕಾ ಅಜಾಪ್ ಹೊವ್ನ್ ಮಟ್ಲ್ಯಾನಿ; “ಹಿ ಬೊಲುಕ್ ಲಾಗಲ್ಲಿ ಲೊಕಾ ಗಾಲಿಲಿಯಾತ್ಲಿ ಲೊಕಾ ನ್ಹಯ್ ಕಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:7
12 ತಿಳಿವುಗಳ ಹೋಲಿಕೆ  

ಎಲ್ಲರೂ ಬೆರಗಾಗಿ ಕಳವಳಗೊಂಡು - ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.


ಇವನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಕೂತು ಭಿಕ್ಷಾಬೇಡುತ್ತಿದ್ದವನೆಂದು ಗುರುತುಹಿಡಿದು ಅವನಿಗೆ ಸಂಭವಿಸಿದ್ದಕ್ಕೆ ವಿಸ್ಮಯಹಿಡಿದವರಾಗಿ ಬಹಳ ಬೆರಗಾದರು.


ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಾವು ಪ್ರತಿಯೊಬ್ಬರು ನಮ್ಮ ನಮ್ಮ ಹುಟ್ಟುಭಾಷೆಯಲ್ಲಿ ಇವರು ಮಾತಾಡುವದನ್ನು ಕೇಳುತ್ತೇವಲ್ಲಾ, ಇದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು