Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:23 - ಕನ್ನಡ ಸತ್ಯವೇದವು J.V. (BSI)

23 ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹರ್ ಎಕ್ ಬಂಧಿಖಾನೊ ಅನಿ ತರಾಸಾ ತುಜಿ ವಾಟ್ ರಾಕಿತ್ ಹಾತ್ ಮನುನ್ ಪವಿತ್ರ್ ಆತ್ಮೊ ಮಾಕಾ ಹುಶ್ಯಾರ್ಕಿ ದಿಯ್ತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:23
14 ತಿಳಿವುಗಳ ಹೋಲಿಕೆ  

ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು