ಅಪೊಸ್ತಲರ ಕೃತ್ಯಗಳು 20:7 - ಕನ್ನಡ ಸತ್ಯವೇದವು J.V. (BSI)7 ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಸಬ್ಬತಾಚ್ಯಾ ದಿಸಿ, ಅಮಿ ಸಗ್ಳ್ಯೆ ಭಾಕ್ರಿ ಮೊಡುಕ್ ಎಕ್ ಹೊವ್ನ್ ಮಿಳುನ್ ಯೆಲ್ಲ್ಯಾಂವ್, ಪಾವ್ಲು ಲೊಕಾಂಚ್ಯಾ ವಾಂಗ್ಡಾ ಬೊಲಲ್ಯಾ ದುಸ್ರ್ಯಾಂದಿಸಿ ತೊ ಥೈತ್ನಾ ಸೊಡುನ್ ಜಾನಾರ್ ಹೊತ್ತೊ, ತಸೆ ಹೊವ್ನ್ ತೆನಿ ತೆಂಚ್ಯಾ ವಾಂಗ್ಡಾ ಅರ್ದ್ಯಾ ರಾತ್ತಿನ್ ಪಾತರ್ಬಿ ಬೊಲ್ಯಾನ್. ಅಧ್ಯಾಯವನ್ನು ನೋಡಿ |